
ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳು: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳು: ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ ನಡೆಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಟಿಕ ಅಭಿಯಾನ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಗಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ತಾಂತ್ರಿಕ ಸಹಾಯಕರು- 1 ಹುದ್ದೆ
ಸಸ್ಯ ಸಂರಕ್ಷಣೆ ಯೋಜನೆಯ ಕೃಷಿಸಂಜೀವಿನಿ ಕಾರ್ಯಕ್ರಮದಡಿ ಕ್ಷೇತ್ರ ಭೇಟಿ ಹಾಗೂ ಕಚೇರಿ ಕರ್ತವ್ಯ ನಿರ್ವಹಿಸಲು
ಕೃಷಿ ಸಂಜೀವಿನಿ ತಾಂತ್ರಿಕ ಸಿಬ್ಬಂದಿ-1 ಹುದ್ದೆ ಹಾಗೂ ಪಿ.ಎಂ. ಕಿಸಾನ್ ಯೋಜನೆಯಡಿ ತಾಂತ್ರಿಕ ಸಹಾಯಕರು-1 ಹುದ್ದೆ,
ಡಾಟಾ ಎಂಟ್ರಿ ಆಪರೇಟರ್-1 ಹುದ್ದೆ
ಈ ಮೇಲಿನ ಖಾಲಿ ಹುದ್ದೆಗೆ ತಾತ್ಕಾಲಿಕ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿಗಾಗಿ ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಹಾಗೂ ಯಾವುದೇ ವಿಷಯ ದಲ್ಲಿ ಪದವಿ ಪಡೆದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಗಳು ಹೊರಗುತ್ತಿಗೆ ಆಧರಿತವಾಗಿದ್ದು, ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 15ರಂದು ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ನಮೂನೆ ಮತ್ತು ಜಂಟಿ ಕೃಷಿ ನಿರ್ದೇಶಕರ ಕಚೇರಿಯಿಂದ ಪಡೆದುಕೊಳ್ಳಬಹುದು ಎಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.