ನ.28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ ಸುದ್ದಿ: ಪ್ರಧಾನಿ ಮೋದಿ ಭೇಟಿ

ನ.28ಕ್ಕೆ ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಆಹ್ವಾನ ಮತ್ತು ಭೇಟಿ ವಿವರಗಳು

ಉಡುಪಿ,: ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥರು ತಮ್ಮ 4 ನೇ ವಿಶ್ವ ಗೀತಾ ಪರ್ಯಾಯದ ಅಂಗವಾಗಿ ಮುಂದಿನ ನ.28ರಂದು ಹಮ್ಮಿಕೊಂಡಿರುವ ಬೃಹತ್ ಗೀತೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಅವರು ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ.
ನ.28ರಂದು ನಡೆಯುವ ಲಕ್ಷ ಕಂಠ ಗೀತಗಾಯನ ಪಾರಾಯಣ ಕಾರ್ಯಕ್ರಮದಲ್ಲಿ ಪ್ರಧಾನಿ ಅವರು ಭಾಗವಹಿಸಲಿದ್ದಾರೆ ಎಂದು ಪರ್ಯಾಯ ಪುತ್ತಿಗೆ ಮಠದ ಮೂಲಗಳು ತಿಳಿಸಿವೆ. ಪ್ರಧಾನಿ ಅವರು ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆಯುವರಲ್ಲದೇ, ಗೀತಾ ಮಂದಿರಕ್ಕೂ ಭೇಟಿ ನೀಡುವ ಕಾರ್ಯಕ್ರಮವಿದೆ ಎಂದು ತಿಳಿದುಬಂದಿದೆ.

ಹಿಂದಿನ ಭೇಟಿ ಸ್ಮರಣೆ

2008-10ರ ಪುತ್ತಿಗೆ ಶ್ರೀಗಳ ತೃತೀಯ ಪರ್ಯಾಯದ ಸಂದರ್ಭದಲ್ಲಿ ಆಗ ಗುಜರಾತ್ನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರು 2008ರ ಮೇ8ರಂದು ಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದು ಪುತ್ತಿಗೆ ಶ್ರೀಗಳಿಂದ ಸನ್ಮಾನ ಸ್ವೀಕರಿಸಿದ್ದರು.
```