ಸುರತ್ಕಲ್ ಬಾರ್ ನಲ್ಲಿ ಗಲಾಟೆ, ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ- ಆಶ್ರಯ ನೀಡಿದವನು ಅಂದರ್ !
ಸುರತ್ಕಲ್ ಬಾರ್ ನಲ್ಲಿ ಗಲಾಟೆ, ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ- ಆಶ್ರಯ ನೀಡಿದವನು ಅಂದರ್
ಮಂಗಳೂರು: ಸುರತ್ಕಲ್ ನ ಕಾನಾದ ದೀಪಕ್ ಬಾರ್ ನಲ್ಲಿ ನಡೆದ ಗಲಾಟೆಯಲ್ಲಿ ಇಬ್ಬರಿಗೆ ಚೂರಿ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಮೂವರು ಆರೋಪಿಗಳು ಮತ್ತು ಆರೋಪಿಗಳಿಗೆ ಆಶ್ರಯ ನೀಡಿದವನನ್ನು ಬಂಧಿಸಲಾಗಿದೆ.
ಆರೋಪಿಗಳಾದ ಸುಶಾಂತ್ ಯಾನೆ ಕಡವಿ(29), ಕೆ ವಿ ಅಲೆಕ್ಸ್(27), ನಿತಿನ್(26), ಮತ್ತು ಆರೋಪಿಗಳಿಗೆ ಆಶ್ರಯ ಕೊಟ್ಟ ವ್ಯಕ್ತಿ ಆರುಣ್ ಶೆಟ್ಟಿ(56) ಎಂಬವರನ್ನು ಬಂಧಿಸಲಾಗಿದೆ. ದಿನಾಂಕ: 23-10-2025 ರಂದು ರಾತ್ರಿ ಸುಮಾರು 10-30 ಗಂಟೆಗೆ ಸುರತ್ಕಲ್ ಕಾನಾ ಬಳಿಯ ದೀಪಕ್ ಬಾರ್ ಬಳಿಯಲ್ಲಿ ಕ್ಷುಲಕ ಕಾರಣಕ್ಕಾಗಿ ಹಸನ್ ಮುಕ್ಷಿತ್ ಮತ್ತು ನಿಝಾಂ ಎಂಬ ಯುವಕರಿಬ್ಬರಿಗೆ ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಗುರುರಾಜ್ ಆಚಾರಿ, ಅಲೆಕ್ಸ್ ಸಂತೋಷ್, ನಿತಿನ್ ಮತ್ತು ಸುಶಾಂತ್ ಸೇರಿಕೊಂಡು ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ್ದರು. ಈ ಪೈಕಿ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಆರೋಪಿ ಗುರುರಾಜ್ ಆಚಾರಿ ಹಾಗೂ ಆರೋಪಿಗಳಿಗೆ ಅರುಣ್ ಶೆಟ್ಟಿಯೊಂದಿಗೆ ಆಶ್ರಯ ನೀಡಿದ ಅಶೋಕ್ ಎಂಬಾತನು ತಲೆಮರೆಸಿಕೊಂಡಿದ್ದಾರೆ. ಇವರ ಪತ್ತೆ ಕಾರ್ಯ ಮುಂದುವರಿದಿದೆ.
