ಮತಾಂತರಕ್ಕೆ ಒಪ್ಪದ ಪ್ರಿಯತಮೆಗೆ ಕೈಕೊಟ್ಟ 'ಲವ್ ಜಿಹಾದ್' ಆರೋಪಿ ಅರೆಸ್ಟ್
ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತಹಳ್ಳಿ ಪೊಲೀಸರು ಆರೋಪಿ ಮೊಹಮ್ಮದ್ ಇಶಾಕ್ನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಆರೋಪಿ ಮಹಮ್ಮದ್ ಇಶಾಕ್ ಹಾಗೂ ಆತನ ಬಾವ ಸಂತ್ರಸ್ತೆಗೆ ಪದೇ ಪದೇ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿಬಂದಿತ್ತು.
ಮತಾಂತರಕ್ಕೆ ಒಪ್ಪದಿದ್ದಕ್ಕೆ ಪ್ರಿಯತಮೆಗೆ ಆತ ಕೈಕೊಟ್ಟು ಮಹಮದ್ ಇಶಾಕ್ ಬೇರೊಬ್ಬ ಯುವತಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ. ಸಂತ್ರಸ್ತೆ ಇದೀಗ ದೂರು ನೀಡಿರುವ ಆರೋಪದ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
2024ರ ಅಕ್ಟೋಬರ್ 17ರಂದು ಯುವತಿಗೆ ಮೊಹಮ್ಮದ್ ಇಶಾಕ್‌ನ ಪರಿಚಯವಾಗಿತ್ತು. ಈ ಪರಿಚಯ ಸ್ನೇಹ ಮತ್ತು ಪ್ರೀತಿಯಾಗಿ ಬೆಳೆದಿತ್ತು. 2024ರ ಅಕ್ಟೋಬರ್ 30ರಂದು ಥಣಿಸಂದ್ರದ ಮಾಲ್‌ನಲ್ಲಿ ಇಬ್ಬರೂ ಭೇಟಿಯಾಗಿದ್ದರು. ಬಳಿಕ ಯುವತಿಯೊಂದಿಗೆ ಇಶಾಕ್ ಸಲುಗೆ ಬೆಳೆಸಿ ಮದುವೆಯಾಗುವುದಾಗಿ ನಂಬಿಸಿದ್ದ. ಬಳಿಕ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ.
ಇಷ್ಟೆಲ್ಲಾ ಆದ ಬಳಿಕ ಆಕೆಯನ್ನು ಮತಾಂತರ ಮಾಡಲು ಪ್ರಯತ್ನಿಸಿದ್ದ ಎನ್ನಲಾಗಿದ್ದು, ಆದರೆ ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿದ್ದಾಳೆ. ಅಲ್ಲದೇ, 2025ರ ಸೆ.14ರಂದು ಮುಸ್ಲಿಂ ಯುವತಿ ಜೊತೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿರುವ ವಿಷಯ ತಿಳಿದು ಪ್ರಶ್ನೆ ಮಾಡಿದಾಗ ಅಸಲಿ ವಿಚಾರ ಬೆಳಕಿಗೆ ಬಂದಿದೆ.
ಇನ್ನು, ಆರೋಪಿ ಇಶಾಕ್ ಹಾಗೂ ಆತನ ಬಾವ ಸಂತ್ರಸ್ತೆಗೆ ಪದೇ ಪದೇ ಮತಾಂತರಕ್ಕೆ ಒತ್ತಾಯ ಮಾಡಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತೆಯೊಂದಿಗೆ ಲೈಂಗಿಕ ಸಂಪರ್ಕ ಬೆಳಸಿ, ಮೋಸ ಮಾಡಲು ಯತ್ನಿಸಿದ್ದಾನೆ. ಈ ಕುರಿತು ಸಂತ್ರಸ್ತೆ ಹೆಚ್ಎಸ್ಆರ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಕೃತ್ಯವು ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆಸಿದ್ದರಿಂದ, ಅಮೃತಹಳ್ಳಿ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿದೆ.
