-->

ಓದುಗರ ಗಮನಕ್ಕೆ

ಓದುಗರ ಗಮನಕ್ಕೆ ಇಮುಂಗಾರು ವೆಬ್ಸೈಟ್‌ನಲ್ಲಿ ಪ್ರಕಟವಾಗುವ ಸುದ್ದಿಗಳಲ್ಲಿ ಯಾವುದೇ ಸಲಹೆಗಳಿದ್ದರೆ, ಅವುಗಳನ್ನು ಪಾಲಿಸುವ ಮುಂಚೆ ತಜ್ಞರ ಸಲಹೆಯಿಂದ ಕರಾರುವಕ್ಕಾಗಿ ಪರಿಶೀಲಿಸಿ. ಇಮುಂಗಾರು ಸಂಸ್ಥೆಯು ಯಾವುದೇ ಹಣಕಾಸಿನ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಯಾವುದೇ ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ನಮ್ಮ ಸಂಸ್ಥೆಯು ಯಾವುದೇ ಜವಾಬ್ದಾರಿಯನ್ನು ಹೊಂದಿರುವುದಿಲ್ಲ. ನಾವು ಸುದ್ದಿಗಳನ್ನು ವಾಟ್ಸಾಪ್‌ನಲ್ಲಿ ಶೇರ್ ಮಾಡುವಾಗ ಜಾಹೀರಾತು ರೂಪದಲ್ಲಿ ಮೂರನೇ ವಾಟ್ಸಾಪ್ ಗ್ರೂಪ್ ಇನ್ವೈಟ್ ಲಿಂಕ್‌ಗಳನ್ನು ಸೇರಿಸಬಹುದು, ಆದರೆ ಇದಕ್ಕೆ ನಮ್ಮ ಸಂಸ್ಥೆಗೆ ಯಾವುದೇ ಸಂಬಂಧವಿಲ್ಲ.
ರೆಹಮಾನ್ ಕೊಲೆ ಪ್ರಕರಣ: ತಲೆ ಮರೆಸಿಕೊಂಡಿರುವ ಭರತ್ ಕುಮ್ಡೇಲ್ ಆರೋಪಿ! ಮೊದಲ ಬಾರಿಗೆ ಪೊಲೀಸರಿಂದ ಮಾಹಿತಿ

ರೆಹಮಾನ್ ಕೊಲೆ ಪ್ರಕರಣ: ತಲೆ ಮರೆಸಿಕೊಂಡಿರುವ ಭರತ್ ಕುಮ್ಡೇಲ್ ಆರೋಪಿ! ಮೊದಲ ಬಾರಿಗೆ ಪೊಲೀಸರಿಂದ ಮಾಹಿತಿ



ಮಂಗಳೂರು: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಭರತ್ ಕುಮ್ಡೇಲ್ ಆರೋಪಿ ಎಂದು ಮೊದಲ ಬಾರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.



ರೆಹಮಾನ್ ಕೊಲೆ ಪ್ರಕರಣ: ತಲೆ ಮರೆಸಿಕೊಂಡಿರುವ ಭರತ್ ಕುಮ್ಡೇಲ್ ಆರೋಪಿ!

ಮಂಗಳೂರು: ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಭರತ್ ಕುಮ್ಡೇಲ್ ಆರೋಪಿ ಎಂದು ಮೊದಲ ಬಾರಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಬ್ದುಲ್ ರಹಮಾನ್ ಕೊಲೆ ಬಳಿಕ ಭರತ್ ಕುಮ್ಡೇಲ್ ತಲೆ ಮರೆಸಿಕೊಂಡಿದ್ದು, ಆತ ಈ ಪ್ರಕರಣದಲ್ಲಿ ಭಾಗಿಯಾಗಿರುವ ಬಗ್ಗೆ ಅನುಮಾನಗಳು ಇದ್ದವು. ಆತನನ್ನು ಪೊಲೀಸರು ಹುಡುಕುತ್ತಿದ್ದರೂ ಈ ಕೊಲೆ ಪ್ರಕರಣದಲ್ಲಿ ಆತ ಭಾಗಿಯಾಗಿರುವ ಬಗ್ಗೆ ಈವರೆಗೆ ಮಾಹಿತಿ ಇರಲಿಲ್ಲ. ಆದರೆ ಇಂದು ಮಾಹಿತಿ ನೀಡಿರುವ ಪೊಲೀಸರು, ಈತ ರೆಹಮಾನ್ ಕೊಲೆ ಪ್ರಕರಣದಲ್ಲಿ ಆರೋಪಿಯೆಂದು ತಿಳಿಸಿದ್ದಾರೆ. ಭರತ್ ಕುಮ್ಡೇಲ್ ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವವರ ಮೇಲೆ ಸಂಘಟಿತ ಅಪರಾಧ ತಡೆ ಕಾಯ್ದೆ( KCOCA Act ) ದಾಖಲಿಸಲಾದ ಬಗ್ಗೆ ಮಾಹಿತಿ ನೀಡಿದ್ದಾರೆ.

ದಿನಾಂಕ 27-05-2025 ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅಬ್ದುಲ್ ರೆಹಮಾನ್ ಕೊಲೆ ಪ್ರಕರಣದ ಸಂಬಂಧ ಅ.ಕ್ರಂ ಕಲಂ:103(1) 109(1), 118(1), 118(2), 61(2) (ಎ), 249(ಎ), 238(ಎ) ಜೊತೆಗೆ 3(5) ಬಿ.ಎನ್.ಎಸ್. ಮತ್ತು ಕಲಂ: 25(1) (ಎ) ಭಾರತೀಯ ಶಸ್ತ್ರಾಸ್ತ್ರಗಳ ಕಾಯ್ದೆ 1959 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿ 13 ಆರೋಪಿಗಳನ್ನು ಬಂಧಿಸಲಾಗಿತ್ತು.

1) ದೀಪಕ್ 2) ಚಿಂತನ್, 3) ಪ್ರಥ್ವಿರಾಜ್ ಜೋಗಿ 4) ಸುಮಿತ್ ಬಿ. ಆಚಾರ್ಯ 5) ವಿ.ರವಿರಾಜ ಮೂಲ್ಯ 6) ಅಭಿನ್ ರೈ 7) ತೇಜಾಕ್ಷ 8) ರವಿಸಂಜಯ್ ಜಿ.ಎಸ್. 9) ಶಿವಪ್ರಸಾದ್ ತುಂಬೆ, 10) ಪ್ರದೀಪ 11) ಶಾಹಿತ್ @ ಸಾಹಿತ್ 12) ಸಚಿನ್ @ ಸಚ್ಚು ರೊಟ್ಟಿಗುಡ್ಡೆ 13) ರಂಜಿತ್ ಯವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಪ್ರಕರಣದ ಇನ್ನೊಬ್ಬ ಆರೋಪಿ ಭರತ್ ರಾಜ್ @ ಭರತ್ ಕುಮ್ಡೇಲು (29, ಪುದು ಗ್ರಾಮ) ಮರೆಸಿಕೊಂಡಿರುವುದಾಗಿದೆ, ಈ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳು ಹಲವು ವರ್ಷಗಳಿಂದ ಕೊಲೆ, ಕೊಲೆ ಯತ್ನ, ಪ್ರಚೋದನಕಾರಿ ಭಾಷಣಗಳು ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದು, ಸಮಾಜದಲ್ಲಿ ಅಶಾಂತಿ ಮತ್ತು ಕೋಮು ಸಂಘರ್ಷಕ್ಕೆ ಕಾರಣರಾಗಿದ್ದಾರೆ. ಹೀಗಾಗಿ, ಅವರ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯ್ದೆ-2000 (THE KARNATAKA CONTROL OF ORGANISED CRIME ACT- 2000) ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ದ.ಕ ಜಿಲ್ಲಾ ಎಸ್ ಪಿ ಡಾ ಅರುಣ್ ಕುಮಾರ್ ಅವರ ಕಚೇರಿ ಪ್ರಕಟನೆ ತಿಳಿಸಿದೆ.

Ads on article

🎁 Amazon Prime ಸದಸ್ಯರಾಗಿರಿ

Amazon Prime Offer
👉 ಉಚಿತ shipping, Prime Video, shopping deals—all in one!

Disclosure: ಈ ಲಿಂಕ್ Amazon Affiliate Program ನ ಭಾಗವಾಗಿದೆ. ನೀವು ಈ ಲಿಂಕ್ ಮೂಲಕ Prime ಸದಸ್ಯರಾಗಿದರೆ, ನಮಗೆ commission ಸಿಗಬಹುದು.

Advertise in articles 1

advertising articles 2

Advertise under the article