ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಸ್ನೇಹಿತರು- ಡೆತ್‌ನೋಟ್ ಬರೆದಿಟ್ಟು ಯುವಕ ಲಾಡ್ಜ್‌ನಲ್ಲಿ ನೇಣಿಗೆ ಶರಣು
Saturday, October 11, 2025
ಉಡುಪಿ: ಖಾಸಗಿ ವೀಡಿಯೋ ಇಟ್ಟುಕೊಂಡು ಬ್ಲಾಕ್ಮೇಲ್ ಮಾಡುತ್ತಿದ್ದ ಸ್ನೇಹಿತರಿಗೆ ಹೆದರಿದ ಯುವಕನೊಬ್ಬ ಲಾಡ್ಜ್‌ನಲ್ಲಿ ನೇಣಿಗೆ ಶರಣಾಗಿರುವ ಘಟನೆ ಕಾರ್ಕಳ ಠಾಣೆ ವ್ಯಾಪ್ತಿಯ ಬೆಳ್ಮಣ್ ನಲ್ಲಿ ನಡೆದಿದೆ.
ಗುರುವಾರ ಸಂಜೆ ಬೆಳ್ಮಣ್‌ನಲ್ಲಿರುವ ಲಾಡ್ಜ್ ನಲ್ಲಿ ಅಭಿಷೇಕ್ ಆಚಾರ್ಯ (23) ಎಂಬ ಯುವಕ ಸಾವಿಗೆ ಶರಣಾಗಿದ್ದಾನೆ.
ಅಭಿಷೇಕ್ ಮಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದು, ಈ ವೇಳೆ ಸ್ಥಳೀಯ ಯುವತಿಯೊಂದಿಗೆ ಸ್ನೇಹದಲ್ಲಿದ್ದ. ಇವರು ಜೊತೆಗಿದ್ದಾಗ ತಮ್ಮದೇ ವೀಡಿಯೋ ಮಾಡಿಕೊಂಡಿದ್ದರು ಎನ್ನಲಾಗುತ್ತಿದ್ದು, ಅದು ಅಭಿಷೇಕ್ ಸ್ನೇಹಿತರಿಗೆ ಸಿಕ್ಕಿತ್ತು.
ಆ ವಿಡಿಯೋ ಮುಂದಿಟ್ಟು ಜಾಲತಾಣದಲ್ಲಿ ಹರಿಯ ಬಿಡುತ್ತೇವೆ ಎಂದು ಹೇಳಿ ಬೆದರಿಕೆ ಹಾಕಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ಯುವಕ ಡೆತ್ ನೋಟ್ ಬರೆದಿಟ್ಟು ಅದರಲ್ಲಿ ಬ್ಲಾಕ್ಮೇಲ್ ಮಾಡಿದ್ದ ನಾಲ್ವರ ಹೆಸರನ್ನೂ ಬರೆದಿಟ್ಟಿದ್ದಾನೆ ಎನ್ನಲಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಡೆತ್ ನೋಟ್ ಮತ್ತು ಆತನ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಮೊಬೈಲ್ ತಪಾಸಣೆ ಬಳಿಕ ಸಾವಿನ ಹಿಂದಿನ ಕಾರಣ ಸಿಗಬಹುದೆಂದು ಪೊಲೀಸರು ತಿಳಿಸಿದ್ದಾರೆ.