300+ ಬ್ಯಾಂಕ್ ಖಾತೆ, 250+ ಸಿಮ್: ಸೈಬರ್ ವಂಚಕ ಬಂಧನ!
ಮಂಗಳೂರು: 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆ ಹಾಗೂ 250 ಕ್ಕೂ ಹೆಚ್ಚು ಸಿಮ್ ಬಳಸಿ ಸೈಬರ್ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
Hmngte Reail kom ಎಂದು ತಿಳಿದುಬಂದಿರುವ Mangte amosh ಬಂಧಿತ ವಂಚಕ. ಈತನು 300 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಹಾಗೂ 250 ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಸೈಬರ್ ವಂಚನೆಗೆ ಬಳಕೆ ಮಾಡಿದ್ದನು.
8 ಮೊಬೈಲ್ ಫೋನ್
20 ವಿವಿಧ ಬ್ಯಾಂಕ್‌ಗಳ ಡೆಬಿಟ್ ಕಾರ್ಡ್‌ಗಳು
18 ವಿವಿಧ ಬ್ಯಾಂಕ್‌ಗಳ ಪಾಸ್‌ಬುಕ್‌ಗಳು
11 ವಿವಿಧ ಬ್ಯಾಂಕ್‌ಗಳ ಚೆಕ್‌ಬುಕ್‌ಗಳು
7 ಸಿಮ್ ಕಾರ್ಡ್‌ಗಳು
20 ವಿವಿಧ ಬ್ಯಾಂಕ್‌ಗಳ ಡೆಬಿಟ್ ಕಾರ್ಡ್‌ಗಳು
18 ವಿವಿಧ ಬ್ಯಾಂಕ್‌ಗಳ ಪಾಸ್‌ಬುಕ್‌ಗಳು
11 ವಿವಿಧ ಬ್ಯಾಂಕ್‌ಗಳ ಚೆಕ್‌ಬುಕ್‌ಗಳು
7 ಸಿಮ್ ಕಾರ್ಡ್‌ಗಳು
ವ್ಯಕ್ತಿಯೊಬ್ಬರಿಗೆ ಕಸ್ಟಮ್ ಹೆಸರಿನಲ್ಲಿ ಹಂತ ಹಂತವಾಗಿ ಒಟ್ಟು 7.27 ಲಕ್ಷ ರೂಪಾಯಿಯನ್ನು ಪಡೆದು ವಂಚನೆ ಮಾಡಿದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಈ ಪ್ರಕರಣದಲ್ಲಿ ತ್ರಿಪುರ ರಾಜ್ಯದ D。
amenjoy Reang (27) ಮತ್ತು Hmngte Reail kom @ Mangte amosh (33) ಎಂಬವರನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆಗಳ ವಿವರಗಳನ್ನು ಪಡೆದುಕೊಂಡು ವಿವರ ಪರಿಶೀಲಿಸಿ ಬ್ಯಾಂಕ್ ಖಾತೆದಾರನಾದ Damenjoy Reang ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
ಈ ಪ್ರಕರಣದಲ್ಲಿ ತನಿಖೆ ಮುಂದುವರೆಸಿ ಬ್ಯಾಂಕ್ ಖಾತೆಗಳನ್ನು ಪಡೆದುಕೊಂಡು ಸೈಬರ್ ವಂಚಕರಿಗೆ ನೀಡಿದ ಸುಳಿವಿನ ಆಧಾರದಲ್ಲಿ Hmngte Reail kom @ Mangte amosh ಎಂಬಾತನನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು.
