ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಉಡುಪಿಯಲ್ಲಿ ಭೀಕರ ಅಪಘಾತ: 5 ಮಂದಿ ಸಾವು

ಉಡುಪಿಯಲ್ಲಿ ಭೀಕರ ಅಪಘಾತ: 5 ಮಂದಿ ಸಾವು

ಉಡುಪಿಯಲ್ಲಿ ಭೀಕರ ಅಪಘಾತ: 5 ಮಂದಿ ಸಾವು

ಉಡುಪಿ: ಗೂಡ್ಸ್‌ ಟೆಂಪೋವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ 5 ಮಂದಿ ಮೃತಪಟ್ಟ ಘಟನೆ ಉಡುಪಿ‌ ಜಿಲ್ಲೆಯ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆದಿತ್ಯವಾರ ಸಂಭವಿಸಿದೆ.
ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್‌ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ.
ಟೆಂಪೋದಲ್ಲಿ ಒಟ್ಟು 9 ಮಂದಿ ಕೆಲಸಗಾರರು ಪ್ರಯಾಣಿಸುತ್ತಿದ್ದರು. 5 ಮಂದಿ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡಿದ್ದ 4 ಮಂದಿ ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಅಪಘಾತದಿಂದ ಕೆಲ ಹೊತ್ತು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಸ್ಥಳೀಯ ಅಧಿಕಾರಿಗಳ ಅಧಿಕೃತ ಮಾಹಿತಿ ಬಂದಂತೆ ವಿವರಗಳನ್ನು ನವೀಕರಿಸಲಾಗುವುದು.