ಸ್ಕ್ಯಾನಿಂಗ್‌ಗೆ ಬಂದ ಯುವತಿಯರ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ- ರೆಡಿಯಾಲಜಿಸ್ಟ್ ವಿರುದ್ಧ FIR

ಸ್ಕ್ಯಾನಿಂಗ್‌ಗೆ ಬಂದ ಯುವತಿಯರ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ

ಸ್ಕ್ಯಾನಿಂಗ್‌ಗೆ ಬಂದ ಯುವತಿಯರ ಖಾಸಗಿ ಅಂಗ ಮುಟ್ಟಿ ಲೈಂಗಿಕ ಕಿರುಕುಳ- ರೆಡಿಯಾಲಜಿಸ್ಟ್ ವಿರುದ್ಧ FIR

ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಯುವತಿಯರ ಖಾಸಗಿ ಅಂಗ ಮುಟ್ಟಿ ರೆಡಿಯಾಲಜಿಸ್ಟ್ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಲ್ಲಿ ನಡೆದಿದೆ.

ಆರೋಪಿ ವಿರುದ್ಧ FIR

ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ಜಯಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಸ್ಕ್ಯಾನಿಂಗ್ ಸಮಯದಲ್ಲಿ ಲೈಂಗಿಕ ಕಿರುಕುಳ

ಇತ್ತೀಚಿಗೆ ಯುವತಿಯೊಬ್ಬರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್‌ ಸೆಂಟರ್‌ಗೆ ಆಗಮಿಸಿದ್ದರು. ಈ ವೇಳೆ ಸ್ಕ್ಯಾನಿಂಗ್‌ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಜೊತೆಗೆ ಖಾಸಗಿ ಅಂಗಗಳಿಗೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದಾನೆ.

ವಿರೋಧಕ್ಕೆ ಬೆದರಿಕೆ

ಇದಕ್ಕೆ ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಮಹಿಳೆಗೆ ಬೆದರಿಸಿದ್ದಾನೆ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದಾನೆ.

ಮಹಿಳೆಯ ದೂರು ಮತ್ತು ರೆಕಾರ್ಡಿಂಗ್

ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ. ಕೂಡಲೇ ಮಹಿಳೆ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲು

ಸಂತ್ರಸ್ತ ಮಹಿಳೆ ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu