ವಿಚ್ಛೇದಿತೆಯರೊಂದಿಗೆ ಸೆಕ್ಸ್, ಲಕ್ಷಾಂತರ ಹಣ ಪೀಕಿಸಿ ವಂಚನೆ: ದೂರು ದಾಖಲಾಗುತ್ತಿದ್ದಂತೆ ಆರೋಪಿ ಸುಸೈಡ್



ಚಿಕ್ಕಬಳ್ಳಾಪುರ: ವಿಚ್ಛೇದಿತೆಯರನ್ನೇ ಗುರಿಯಾಗಿಸಿಕೊಂಡು ಮರುಮದುವೆ ಆಗೋದಾಗಿ ನಂಬಿಸಿ ವಂಚನೆ ಮಾಡಿದ್ದ ಪ್ರಕರಣದ ಆರೋಪಿ ಸಿ.ಎಂ.ಗಿರೀಶ್​​ ನೇಣಿಗೆ ಶರಣಾಗಿದ್ದಾನೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಕನ್ನಂಪಲ್ಲಿ‌ ನಿವಾಸಿ ಆಗಿರುವ ಈತ ತನ್ನ ಮನೆಯಲ್ಲೇ ನೇಣು ಬಿಗಿದು ಗಿರೀಶ್​​ ಆತ್ಮಹತ್ಯೆ ಮಾಡಿಕೊಂಡಿದ್ದಾನೆ‌‌. ವಂಚನೆ ಪ್ರಕರಣ ಸಂಬಂಧ ನಾಲ್ವರು ಸಂತ್ರಸ್ತೆಯರು ಈತನ ವಿರುದ್ಧ ದೂರು ನೀಡಿದ್ದರು. ಈ ಬಗ್ಗೆ ಚಿಕ್ಕಬಳ್ಳಾಪುರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರು ದಾಖಲಾಗುತ್ತಿದ್ದಂತೆ ಭಯದಿಂದ ಗಿರೀಶ್​​ ನೇಣಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ತಿಂಗಳ ಹಿಂದೆಯೂ ಈತ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆದಿದ್ದ ಎನ್ನಲಾಗಿದೆ.

ಸಿ.ಎಂ.ಗಿರೀಶ್ ಅಲಿಯಾಸ್ ಸಾಯಿಸುದೀಪ್  ಒಬ್ಬಂಟಿ ವಿವಾಹಿತ ಮಹಿಳೆಯರನ್ನೇ ಟಾರ್ಗೆಟ್​​ ಮಾಡ್ತಿದ್ದ. ಫೇಸ್​​ಬುಕ್​ ಮೂಲಕ ಪರಿಚಯ ಮಾಡಿಕೊಂಡು, ಮರುಮದುವೆ ಹೆಸರಲ್ಲಿ ಅವರನ್ನು ಪುಸಲಾಯಿಸುತ್ತಿದ್ದ. ಬಳಿಕ ಲೈಂಗಿಕವಾಗಿ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿದ್ದ. ಅಲ್ಲದೆ ಖಾಸಗಿ ಕ್ಷಣಗಳ ವಿಡಿಯೋ ಮತ್ತು ಆಡಿಯೋಗಳನ್ನು ಇಟ್ಟುಕೊಂಡು ಅವರಿಂದ ಲಕ್ಷಾಂತರ ಹಣ ಪೀಕಿಸುತ್ತಿದ್ದ.

ನಂದಗುಡಿ, ಬೆಂಗಳೂರು, ಚಿಕ್ಕಬಳ್ಳಾಪುರ, ಬಂಗಾರಪೇಟೆ ಸೇರಿದಂತೆ 5ಕ್ಕೂ ಅಧಿಕ ಮಹಿಳೆಯರಿಗೆ ವಂಚಿಸಿ, ಅವರಿಂದ ಲಕ್ಷಾಂತರ ರೂ. ಹಣ ಪಡೆದುಕೊಂಡಿದ್ದ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಾಮಾಜಿಕ ಕಾರ್ಯಕರ್ತ ಕೃಷ್ಣಮೂರ್ತಿ ಅವರ ಮುಂದಾಳತ್ವದಲ್ಲಿ ಸಂತ್ರಸ್ತ ಮಹಿಳೆಯರು ಗಿರೀಶ್​ ವಿರುದ್ಧ ಚಿಂತಾಮಣಿ ನಗರಠಾಣೆಗೆ ದೂರು ನೀಡಿದ್ದರು.

ಮರುಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಬೆಂಗಳೂರಿನ ಮಹಿಳೆಯಿಂದ 25 ಲಕ್ಷ ಹಣ ಪಡೆದು ವಂಚನೆ, ಚಿಕ್ಕಬಳ್ಳಾಪುರ ಮೂಲದ ಸರ್ಕಾರಿ ಉದ್ಯೋಗಿ ಮಹಿಳೆ ಬಳಿ 5 ಲಕ್ಷ ರೂ. ಹಣ ಪಡೆದು ಕಿರುಕುಳ, ಕೆ.ಆರ್.ಪುರಂ ಮೂಲದ ವಿವಾಹಿತ ಮಹಿಳೆಯ ಮಾಂಗಲ್ಯ ಚೈನ್, ಕಿವಿಯೋಲೆ ಸೇರಿದಂತೆ 40 ಗ್ರಾಂ ಚಿನ್ನ ತೆಗೆದುಕೊಂಡು ಮೋಸ ಮತ್ತು ಹೊಸಕೋಟೆಯ ನಂದಗುಡಿಯಲ್ಲಿ ಶ್ರೀಮಂತ ಯುವತಿಯನ್ನು ಮದುವೆಯಾಗಿ ಹಣಕ್ಕಾಗಿ ಪೀಡನೆ, ಬಂಗಾರಪೇಟೆಯಲ್ಲಿ ಆಂಟಿಯನ್ನು ಬುಟ್ಟಿಗೆ ಹಾಕಿಕೊಂಡು ಕಿರುಕುಳ ನೀಡಿರುವ ಆರೋಪಗಳು ಗಿರೀಶ್​​ ಮೇಲೆ ಕೇಳಿಬಂದಿದ್ದವು.

BREAKING NEWS
Loading latest news...
Join our WhatsApp Channel Powered By : Online Pudu