ಬುಧವಾರ ಸಂಜೆ ವೇಳೆಗೆ ಮಂಗಳೂರಿಗೆ ನೀರು ಪೂರೈಕೆ ಪುನಾರಂಭ

ಮಂಗಳೂರಿಗೆ ನೀರು ಸರಬರಾಜು ಪುನರಾರಂಭ

ಬುಧವಾರ ಸಂಜೆ ವೇಳೆಗೆ ಮಂಗಳೂರಿಗೆ ನೀರು ಪೂರೈಕೆ ಪುನಾರಂಭ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ (80 MLD) ರೇಚಕ ಸ್ಥಾವರದಿಂದ ನಗರಕ್ಕೆ ನೀರು ಪೂರೈಸುವ 1100 ಮಿ.ಮೀ. ವ್ಯಾಸದ ಮುಖ್ಯ ಕೊಳವೆ ದಿನಾಂಕ 17.11.2025 ರಂದು ಬೆಳಗಿನ ಸಮಯದಲ್ಲಿ ಪಡೀಲ್ ಸಮೀಪದ ಕಣ್ಣೂರು ಬಳಿ ಹಾನಿಗೊಳಗೊಂಡಿದೆ.
ಈ ಹಿನ್ನೆಲೆ ತುರ್ತು ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ದಿನಾಂಕ 19.11.2025 ರಂದು ಬೆಳಿಗ್ಗೆ ದುರಸ್ತಿ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆ ಇದೆ.
ಬುಧವಾರ ಸಂಜೆ ವೇಳೆಗೆ ನೀರು ಸರಬರಾಜು ಯಥಾಸ್ಥಿತಿಗೆ ಮರಳಲಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಕಮೀಷನರ್ ತಿಳಿಸಿದ್ದಾರೆ.

ಪ್ರಭಾವಿತ ಪ್ರದೇಶಗಳು

ಈ ಅವಧಿಯಲ್ಲಿ ಪಡೀಲ್, ಮರೋಳಿ, ಕಂಕನಾಡಿ, ಮಂಗಳಾದೇವಿ, ಜೆಪು–ಪಳ್ನೀರ್, ಮುಳಿಹಿತ್ಲು, ಬೋಳಾರ, ಕಾರ್ ಸ್ಟ್ರೀಟ್, ಮಣ್ಣಗುಡ್ಡ, ಪಾಂಡೇಶ್ವರ, ಸ್ಟೇಟ್ ಬ್ಯಾಂಕ್, ಶಕ್ತಿನಗರ, ಕಣ್ಣೂರು, ಬಜಾಲ್, ಜಪ್ಪಿನಮೊಗರು, ಅಳಪೆ, ಅತ್ತಾವರ, ಉಲ್ಲಾಸ್‌ನಗರ, ಚಿಲಿಂಬಿ, ಕೋಡಿಕಲ್, ಉರ್ವಾ ಸ್ಟೋರ್, ಆಶೋಕನಗರ, ಕುಡುಪು, ವಾಮಂಜೂರು, ಬೋಂದೆಲ್, ಕಾವೂರು, ಮರಕಡ ಮುಂತಾದ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಲಿದೆ.
BREAKING NEWS
Loading latest news...
Join our WhatsApp Channel Powered By : Online Pudu