ಉಡುಪಿ: ಯುವತಿಯ ಅತ್ಯಾಚಾರಗೈದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತ ಪ್ರದೀಪ್‌ ಪೂಜಾರಿ ಅರೆಸ್ಟ್




ಉಡುಪಿ: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನನ್ನು ಉಡುಪಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಪೆರ್ಡೂರು ಹಿಂದೂ ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. 

ಈತ ಯುವತಿಯೊಬ್ಬಳನ್ನು ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದ. ಆದರೆ ಆಕೆ ಆತನೊಂದಿಗೆ ಮದುವೆಯಾಗುವುದನ್ನು ನಿರಾಕರಿಸಿದ್ದಳು. ಅಲ್ಲದೆ ಈ ಬಗ್ಗೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆತನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿ ಬಂದಿದ್ದನು. ಮತ್ತೆ ಅದೇ ದ್ವೇಷದಲ್ಲಿ ಪ್ರದೀಪ್ ಪೂಜಾರಿ, ನ.29ರಂದು ನಿರ್ಜನ ಪ್ರದೇಶದಲ್ಲಿ ನಡೆದುಕೊಂಡು ಹೋಗುತ್ತಿದ್ದ ಆ ಯುವತಿಯನ್ನು ಅಡ್ಡಗಟ್ಟಿ ಮತ್ತೆ ಮದುವೆಯಾಗುವಂತೆ ಪೀಡಿಸಿದ್ದಾನೆ. ಇದಕ್ಕೆ ಆಕೆ ನಿರಾಕರಿಸಿದಾಗ ಆಕೆಯನ್ನು ಅಲ್ಲೇ ಕತ್ತು ಹಿಸುಕಿ ಬೆದರಿಸಿ ಅತ್ಯಾಚಾರ ಎಸಗಿದ್ದಾಗಿ ದೂರಲಾಗಿದೆ.

ಈ ಬಗ್ಗೆ ಸಂತ್ರಸ್ತ ಯುವತಿ ಮನೆಯವರಿಗೆ ಮಾಹಿತಿ ನೀಡಿದ್ದು, ಅದರಂತೆ ಪೋಷಕರು ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
BREAKING NEWS
Loading latest news...
Join our WhatsApp Channel Powered By : Online Pudu