ಡಿವೈಡರ್‌ಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು: ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನ




ಧಾರವಾಡ: ರಸ್ತೆ ವಿಭಾಜಕಕ್ಕೆ ಡಿಕ್ಕಿಯಾದ ಪರಿಣಾಮ ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದು ಲೋಕಾಯುಕ್ತ ಇನ್ಸ್‌ಪೆಕ್ಟರ್ ಪಂಚಾಕ್ಷರಿ ಸಾಲಿಮಠ  ಸಜೀವ ದಹನಗೊಂಡಿದ್ದಾರೆ. 

ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟ‌ರ್ ಪಂಚಾಕ್ಷರಿ ಸಾಲಿಮಠ ಕಾರಿನೊಳಗಡೆಯೇ ಸುಟ್ಟು ಕರಕಲಾಗಿದ್ದಾರೆ. ತಮ್ಮ ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಯಾಗಿದೆ. 

ಈ ಸಂದರ್ಭ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿದೆ. ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್‌ಪೆಕ್ಟ‌ರ್ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದರೆ ಅಷ್ಟರೊಳಗೆ ಇನ್ಸ್‌ಪೆಕ್ಟರ್‌ ಕರಕಲಾಗಿದ್ದಾರೆ. ಕಾರಿನೊಳಗೆ ಸುಟ್ಟು

ಇನ್ಸೆಕ್ಟರ್ ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುಲು ಹೋಗುತ್ತಿದ್ದರು. ಆದ್ರೆ, ವಿಧಿ ಅವರನ್ನು ಅರ್ಧ ಹಾದಿಯಲ್ಲೇ ಈ ರೀತಿ ಬಲಿಪಡೆದುಕೊಂಡಿದೆ. ಮೊನ್ನೆ ಅಷ್ಟೇ ಕರ್ನಾಟಕ ಹಿರಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಕಾರು ಅಪಘಾತದಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟ‌ರ್ ಬಲಿಯಾಗಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu