ಸ್ತ್ರೀರೋಗ ತಜ್ಞೆ ತಾಯಿ - ಪುತ್ರ ನೇಣಿಗೆ ನೇಣಿಗೆ ಶರಣು- ಎರಡನೇ ಸೊಸೆ ಮನೆಯಲ್ಲಿರುವಾಗಲೇ ಜೀವ ತೊರೆದ ಎರಡು ಜೀವಗಳು


ಶಿವಮೊಗ್ಗ: ಸ್ತ್ರೀರೋಗ ತಜ್ಞೆಯಾಗಿರುವ ತಾಯಿ ಹಾಗೂ ಪುತ್ರ ಮನೆಯಲ್ಲಿಯೇ ತಮ್ಮ ತಮ್ಮ ಬೆಡ್‌ರೂಮ್‌ಗಳಲ್ಲಿ ನೇಣಿಗೆ ಶರಣಾಗಿರುವ ಘಟನೆ ಶಿವಮೊಗ್ಗ ನಗರದ ಅಶ್ವತ್ಥ ಬಡಾವಣೆಯಲ್ಲಿ ನಡೆದಿದೆ.

ತಾಯಿ ಡಾ.ಜಯಶ್ರೀ(57) ಮತ್ತು ಅವರ ಪುತ್ರ ಆಕಾಶ್(32) ಆತ್ಮಹತ್ಯೆಗೆ ಶರಣಾದವರು. ಜಯಶ್ರೀ ಶಿವಮೊಗ್ಗದ ಹೊಮ್ಮರಡಿ ಆಸ್ಪತ್ರೆಯಲ್ಲಿ ಸ್ತ್ರೀರೋಗ ತಜ್ಞೆಯಾಗಿದ್ದರು. ನಿನ್ನೆ ರಾತ್ರಿ ತಾಯಿ ಮತ್ತು ಮಗನ ಮಧ್ಯೆ ಜಗಳವಾಗಿದೆ ಎನ್ನಲಾಗಿದೆ. ಬಳಿಕ ಮಗ ಹಾಗೂ ಸೊಸೆ ಹೆಸರಿಗೆ ಆಸ್ತಿ ಬರೆದಿಟ್ಟು ಡಾ. ಜಯಶ್ರೀ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೂ ಮೊದಲು ತಾಯಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಅದನ್ನು ನೋಡಿ ಪುತ್ರ ಆಕಾಶ್ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೂರು ವರ್ಷದ ಹಿಂದೆಯಷ್ಟೇ ಆಕಾಶ್‌ನ ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದರಿಂದ ಆಕಾಶ್ ಆಘಾತಕ್ಕೆ ಒಳಗಾಗಿದ್ದ. ಆಘಾತದಿಂದ ಹೊರಬರಲು ಕಳೆದ ಮೇ ನಲ್ಲಿ ಆಕಾಶ್ ಮತ್ತೊಂದು ಮದುವೆಯಾಗಿ ಆರು ತಿಂಗಳಾಗಿತ್ತು. ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆಕಾಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೂಲಗಳ ಪ್ರಕಾರ, ಆಕಾಶ್ ರಿಯಲ್ ಎಸ್ಟೇಟ್‌ನಲ್ಲಿ ತಾನು ಹಣ ತೊಡಿಸಬೇಕು ಎಂದು ಅದಕ್ಕಾಗಿ ನನಗೆ ಹಣ ಬೇಕು ಎಂದು ಕೇಳುತ್ತಿದ್ದ ಎನ್ನಲಾಗುತ್ತಿದೆ. ಇದಕ್ಕೋಸ್ಕರನೇ ತಾಯಿ ಮತ್ತು ಮಗನ ಮಧ್ಯೆ ಆಗಾಗ್ಗೆ ಜಗಳಗಳು ನಡೆಯುತ್ತಿದ್ದವು. ಇದು ಇತ್ತೀಚಿಗೆ ಮದುವೆಯಾಗಿ ಬಂದ ನವ್ಯಗೆ ಕೂಡ ಮಾಮೂಲಾಗಿತ್ತು. ಆದರೆ ಈ ಜಗಳ ವಿಕೋಪಕ್ಕೆ ಹೋಗಿದ್ದು ಈ ಆತ್ಮಹತ್ಯೆಗೆ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಮತ್ತೊಂದು ಮೂಲಗಳ ಪ್ರಕಾರ ಇಬ್ಬರಿಗೂ ಮೊದಲನೇ ಪತ್ನಿಯ ಸಾವಿನ ಭಯ, ಖಿನ್ನತೆ ಕಾಡುತ್ತಿತ್ತು. ಎನ್ನಲಾಗುತ್ತಿದೆ. ಮೂಲತಃ ನ್ಯಾಮತಿಯ ನಿವಾಸಿಗಳಾದ ಹೊಮ್ಮರಡಿ ಕುಟುಂಬಕ್ಕೆ ಆಸ್ತಿಗೇನು ಕೊರತೆ ಇರಲಿಲ್ಲ 25 ಎಕರೆ ತೋಟ, ಇರಲು ಮನೆ, ಹೊಮ್ಮರಡಿ ಕಾಂಪ್ಲೆಕ್ಸ್‌ ಅದರ ಬಾಡಿಗೆ ಹಣ, ಹೊನ್ನಾಳಿಯಲ್ಲಿ ಸೈಟ್‌ಗಳು ಎಲ್ಲವೂ ಇದ್ದವು ಆದರೆ ಬಹು ಮುಖ್ಯವಾಗಿ ಬೇಕಾಗಿದ್ದ ಮಾನಸಿಕ ನೆಮ್ಮದಿ ಇರಲಿಲ್ಲ ಅದುವೇ ಈ ಆತ್ಮಹತ್ಯೆಗೆ ಕಾರಣವಾಗಿರಬಹುದು ಎನ್ನಲಾಗಿದೆ.

ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಭೇಟಿ ನೀಡಿದ ವಿನೋಬನಗರ ಠಾಣಾ ಪೊಲೀಸರು ಮನೆ ಪರಿಶೀಲನೆ ಮಾಡಿದ್ದಾರೆ.