ನಿಟ್ಟೆ ಶಿಕ್ಷಣ ಸಮೂಹದ ಅಧ್ಯಕ್ಷ ಎನ್.ವಿನಯ ಹೆಗ್ಡೆ ನಿಧನ



ಮಂಗಳೂರು: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿ ಡಾ. ಎನ್.ವಿನಯ ಹೆಗ್ಡೆ(86) ಗುರುವಾರ ಬೆಳಗಿನ ಜಾವ ಮಂಗಳೂರಿನ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ರಾಜ್ಯದ ಪ್ರಮುಖ ಶಿಕ್ಷಣ ತಜ್ಞರು, ಉದ್ಯಮಿ ಮತ್ತು ಸಮಾಜ ಸೇವಕರಾಗಿರುವ ವಿನಯ ಹೆಗ್ಡೆ ಅವರು ಲೋಕಸಭಾ ಸ್ಪೀಕರ್ ಆಗಿದ್ದ ದಿವಂಗತ ಜಸ್ಟಿಸ್ ಕೆ.ಎಸ್. ಹೆಗ್ಡೆ ಅವರ ಪುತ್ರ.
ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ತಮ್ಮ ಶಿಕ್ಷಣ ಪೂರೈಸಿದವರು. 

ವಿನಯ್ ಹೆಗ್ಡೆ ಅವರು 1979ರಲ್ಲಿ 'ನಿಟ್ಟೆ ಎಜುಕೇಶನ್ ಟ್ರಸ್ಟ್' ಸ್ಥಾಪಿಸಿದರು. ಇಂದು ನಿಟ್ಟೆ ಶಿಕ್ಷಣ ಸಂಸ್ಥೆಗಳು ಮಂಗಳೂರು, ಬೆಂಗಳೂರು ಮತ್ತು ನಿಟ್ಟೆಯಲ್ಲಿ 40ಕ್ಕೂ ಅಧಿಕ ವಿದ್ಯಾಸಂಸ್ಥೆಗಳನ್ನು ಹೊಂದಿವೆ. ಇದರಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ದಂತ ವೈದ್ಯಕೀಯ, ಫಾರ್ಮಸಿ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜುಗಳು ಸೇರಿವೆ.

ಪ್ರಸ್ತುತ ವಿನಯ್ ಹೆಗ್ಡೆ ಅವರು ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು. ಲೆಮಿನಾ ಸಸ್ಪೆನ್ಷನ್ ಪ್ರೈವೇಟ್ ಲಿಮಿಟೆಡ್ ಸೇರಿದಂತೆ ಲೆಮಿನಾ ಸಮೂಹ ಸಂಸ್ಥೆಗಳ ಸ್ಥಾಪಕ ಅಧ್ಯಕ್ಷರಾಗಿದ್ದಾರೆ. ಇದು ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆಯಲ್ಲಿ ಪ್ರಮುಖ ಸಂಸ್ಥೆಯಾಗಿದೆ.
BREAKING NEWS
Loading latest news...
Join our WhatsApp Channel Powered By : Online Pudu