ನವದೆಹಲಿ: ಆಕೆಗೆ ಇನ್ನೂ 13 ವರ್ಷ. ಶಿಕ್ಷಣಕ್ಕಾಗಿ ಹಾಸ್ಟೆಲ್ ಸೇರಿದ್ದ ಆಕೆ ಇದೀಗ ಗರ್ಭಿಣಿಯಾಗಿದ್ದಾಳೆ. ತಮ್ಮ ಪುತ್ರಿ ಸರ್ಕಾರಿ ಹಾಸ್ಟೆಲ್‌ನಲ್ಲಿ ಸುರಕ್ಷಿತಳಾಗಿದ್ದಾಳೆ ಎಂದು ನಿರಾಳರಾಗಿದ್ದ ಪೋಷಕರು ಇದೀಗ ಪುತ್ರಿ ಗರ್ಭಿಣಿಯಾಗಿದ್ದಾಳೆ ಎಂಬ ತಿಳಿದು ಆಘಾತಕ್ಕೊಳಗಾಗಿದ್ದಾರೆ. ಇಷ್ಟು ಸಣ್ಣ ವಯಸ್ಸಿನಲ್ಲಿ ಮಗುವನ್ನು ಹೆರಲು ಸಾಧ್ಯವಿಲ್ಲವೆಂದು ಆ ಮಗುವನ್ನು ಅಬಾರ್ಷನ್ ಮಾಡಿಸೋಣ ಎಂದು ಮನೆಯವರು ನಿರ್ಧಾರ ಮಾಡುವಷ್ಟರಲ್ಲಿ ಸಮಯ ಕೈಮೀರಿ ಹೋಗಿತ್ತು.
ಮಧ್ಯ ಪ್ರದೇಶದ ಬಾಲಘಾಟ್ನ ಸರ್ಕಾರಿ ಹಾಸ್ಟೆಲ್‌ನಲ್ಲಿ 8ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಹಾಸ್ಟೇಲ್‌ಗೆ ತರಕಾರಿ ಹಾಕುವ ಅಲ್ತಾಫ್ ಎಂಬ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಹಲವು ತಿಂಗಳುಗಳ ಕಾಲ ದೌರ್ಜನ್ಯ ನಡೆಸಿದ ಕಾಮುಕನಿಂದ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ.
ಹಾಸ್ಟೆಲ್‌ನಲ್ಲಿ ಓದುತ್ತಿದ್ದ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಆದರೆ, ಆಕೆ ಈ ಬಗ್ಗೆ ಯಾರಲ್ಲೂ ಹೇಳಿಕೊಂಡಿರಲಿಲ್ಲ. ಆರೋಪಿ ಸುಮಾರು 4 ತಿಂಗಳ ಕಾಲ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ. ಆತ ಆಕೆಗೆ ಕೊಲೆ ಬೆದರಿಕೆ ಹಾಕುತ್ತಿದ್ದ. ಇತ್ತೀಚೆಗೆ ಆ ಬಾಲಕಿಯ ಆರೋಗ್ಯ ಹದಗೆಟ್ಟಾಗ ಆಕೆಯನ್ನು ಆಸ್ಪತ್ರೆಗೆ ಕರೆತರಲಾಯಿತು. ಅಲ್ಲಿ ತಪಾಸಣೆ ಮಾಡಿದಾಗ ಆಕೆ 5 ತಿಂಗಳ ಗರ್ಭಿಣಿ ಎಂದು ತಿಳಿದುಬಂದಿತ್ತು. ಈ ಘಟನೆಯು ಖುರೈನಲ್ಲಿರುವ ಬುಡಕಟ್ಟು ಸರ್ಕಾರಿ ಹಾಸ್ಟೆಲ್‌ನಲ್ಲಿ ನಡೆದಿದೆ. ವಿದ್ಯಾರ್ಥಿನಿಯನ್ನು ಭೋಪಾಲ್‌ನ ಹಮೀದಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆ ಬಾಲಕಿ 2 ವರ್ಷಗಳಿಂದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಅಲ್ತಾಫ್ ಎಂಬ ಯುವಕ ಹಾಸ್ಟೆಲ್‌ಗೆ ತರಕಾರಿ ನೀಡಲು ಬರುತ್ತಿದ್ದ. ಸೆಪ್ಟೆಂಬರ್ 2025ರಲ್ಲಿ ಆತ ಆ ವಿದ್ಯಾರ್ಥಿನಿಯ ಕೋಣೆಗೆ ಬಲವಂತವಾಗಿ ನುಗ್ಗಿ ಬಾಗಿಲು ಮುಚ್ಚಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದ. ಆಕೆ ವಿರೋಧಿಸಿದಾಗ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ.
ಭಯಗೊಂಡ ವಿದ್ಯಾರ್ಥಿನಿ ಈ ಬಗ್ಗೆ ಯಾರಿಗೂ ಹೇಳಲಿಲ್ಲ. ನಂತರ, ಆರೋಪಿಗೆ ಅವಕಾಶ ಸಿಕ್ಕಾಗಲೆಲ್ಲಾ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಲೇ ಇದ್ದ. ಆ ವಿದ್ಯಾರ್ಥಿನಿಗೆ ಹೊಟ್ಟೆ ನೋವು ಕಾಣಿಸಿಕೊಂಡಾಗ, ಅವಳು ವಾರ್ಡನ್ ಮತ್ತು ಕಾವಲುಗಾರನಿಗೆ ಮಾಹಿತಿ ನೀಡಿದ್ದಳು. ಆ ವಾರ್ಡನ್ ವಿದ್ಯಾರ್ಥಿನಿಯ ಪೋಷಕರಿಗೆ ಕರೆ ಮಾಡಿದ್ದರು. ಕುಟುಂಬದ ಸದಸ್ಯರು ಆಕೆಯನ್ನು ಭೋಪಾಲ್‌ನ ಹಮೀದಿಯಾ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ಪರೀಕ್ಷೆಯ ಸಮಯದಲ್ಲಿ ವೈದ್ಯರು ಆಕೆ ಗರ್ಭಿಣಿ ಎಂದು ಬಹಿರಂಗಪಡಿಸಿದ್ದರು.
ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಬುಡಕಟ್ಟು ವ್ಯವಹಾರಗಳ ಇಲಾಖೆಯ ಸಹಾಯಕ ಆಯುಕ್ತರು ಕಸ್ತೂರ್ಬಾ ಗಾಂಧಿ ಬಾಲಿಕಾ ಹಾಸ್ಟೆಲ್‌ನ ಸೂಪರಿಂಟೆಂಡೆಂಟ್ ಚೈನ್‌ಬಾಟಿ ಸೈಯಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿದ್ದಾರೆ. ಆ ಬಾಲಕಿಯ ದೇಹದಲ್ಲಿ ಯಾವ ಬದಲಾವಣೆಯನ್ನೂ ನೀವು ಗುರುತಿಸಲಿಲ್ಲವೇ? ಎಂಬ ಪ್ರಶ್ನೆ ಮಾಡಿರುವ ಅವರು ಈ ಆದೇಶ ಹೊರಡಿಸಿದ್ದಾರೆ.
ಈ ಘಟನೆ ವರದಿಯಾದ ತಕ್ಷಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಪೊಲೀಸರು ಆ ಗ್ರಾಮದ ಯುವಕನನ್ನು ಬಂಧಿಸಿದ್ದಾರೆ.