ಕಾಸರಗೋಡು: ಆಸ್ತಿ ವಿಚಾರಕ್ಕೆ ತಂದೆಯ ಕತ್ತಿಯೇಟಿಗೆ ಪುತ್ರಿ ಬಲಿ- ಬೆನ್ನಲ್ಲೇ ಚಿಕ್ಕಪ್ಪನೂ ಸಾವು




  ಮೃತ ಜುಮೈಲಾ - ಆರೋಪಿ ಉಮರ್ ಫಾರೂಕ್

ಕಾಸರಗೋಡು: ಗಡಿಭಾಗ ಕೇರಳದ ಮಂಜೇಶ್ವರದ ತೂಮಿನಾಡಿನಲ್ಲಿ ತಂದೆ ಹಾಗೂ ಚಿಕ್ಕಪ್ಪನೊಂದಿಗಿನ  ಬಿಡಿಸಲು ಹೋದ ಪುತ್ರಿ ಕತ್ತಿಯೇಟಿಗೆ ಬಲಿಯಾದ ಬೆನ್ನಲ್ಲೇ ಮಾರಣಾಂತಿಕವಾಗಿ ಗಾಯಗೊಂಡಿದ್ದ ಚಿಕ್ಕಪ್ಪನೂ ಮೃತಪಟ್ಟಿದ್ದಾರೆ.

ಮಾರಣಾಂತಿಕವಾಗಿ ಇರಿತಕ್ಕೆ ಒಳಗಾಗಿದ್ದ ಶೇಕುಂಞಿ ಎಂಬವರು ಫೆ.3 ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಪತ್ನಿಯ ಸಹೋದರಿಯ ಪುತ್ರಿ ಜುಮೈಲಾ(17) ಸೋಮವಾರ ಸಂಜೆ ಕೊಲೆಯಾಗಿದ್ದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶೇಕುಂಞಿ ಇಂದು ಕೊನೆಯುಸಿರೆಳೆದಿದ್ದಾರೆ. ಜುಲೈಲಾ ಅವರ ತಂದೆ ಉಮರ್ ಫಾರೂಕ್ ಕೊಲೆ ಆರೋಪಿಯಾಗಿದ್ದಾನೆ.

                     ಮೃತ ಚಿಕ್ಕಪ್ಪ ಶೇಕುಂಞಿ

ಆಸ್ತಿ ವಿಚಾರವಾಗಿ ಉಮರ್ ಫಾರೂಕ್ ಮತ್ತು ಆತನ ಪತ್ನಿಯ ತಂಗಿ(ನಾದಿನಿ)ಯ ಪತಿ ಶೇಕುಂಞಿ ನಡುವೆ ವೈಮನಸ್ಸು ಇತ್ತೆನ್ನಲಾಗಿದೆ.
ಇದೇ ವಿಚಾರವಾಗಿ ಸೋಮವಾರ ಸಂಜೆ ಉಮರ್ ಫಾರೂಕ್ ಮತ್ತು ಶೇಕುಂಞಿ ಮಧ್ಯೆ ನಡೆದ ವಾಗ್ವಾದ ತಾರಕ್ಕೇರಿದೆ. ಈ ವೇಳೆ ಶೇಕುಂಞಿಯವರ ಮೇಲೆ ಆರೋಪಿ ಉಮರ್ ಫಾರೂಕ್ ಮಾರಕಾಸ್ತ್ರದಿಂದ ದಾಳಿ ಮಾಡಿದ್ದಾನೆ. ದಾಳಿಯನ್ನು ತಡೆಯಲೆತ್ನಿಸಿದ ಪುತ್ರಿ ಜುಮೈಲಾರಿಗೂ ಉಮರ್ ಫಾರೂಕ್ ಇರಿದಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಜುಮೈಲಾ ಸ್ಥಳದಲ್ಲೇ ಮೃತಪಟ್ಟಿದ್ದರು. 

ದಾಳಿಗೊಳಗಾಗಿ ಗಂಭೀರಾವಸ್ಥೆಯಲ್ಲಿದ್ದ ಶೇಕುಂಞಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಕರಣದ ಆರೋಪಿ ಉಮರ್ ಫಾರೂಕ್ ನನ್ನು ಪೊಲೀಸರು ಸೋಮವಾರ ಸಂಜೆಯೇ ಬಂಧಿಸಿದ್ದಾರೆ.
BREAKING NEWS
Loading latest news...
Join our WhatsApp Channel Powered By : Online Pudu