ಕಮಲಾಕರ ಭಟ್ ಗುರೂಜಿಯೊಂದಿಗೆ ಮಹಿಳೆಯ ಅಕ್ರಮ ಸಂಬಂಧ: ದೂರು ನೀಡಿದ್ದಕ್ಕೆ ಹಲ್ಲೆ, ಓರ್ವ ಸಾವು


ಕಾರವಾರ: ಕಮಲಾಕರ ಭಟ್ ಗುರೂಜಿಯೊಂದಿಗೆ ಮಹಿಳೆಯೊಬ್ಬಳ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಬಲಿಯಾಗಿ ಮತ್ತೀರ್ವರು ಗಂಭೀರವಾಗಿ ಗಾಯಗೊಂಡ‌ ಘಟನೆ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ.

ಕಮಲಾಕರ ಭಟ್ ಗುರೂಜಿಯೊಂದಿಗೆ ಮಹಿಳೆ ಅನೈತಿಕ ಸಂಬಂಧ ಹೊಂದಿರುವ ಬಗ್ಗೆ ದೂರು ನೀಡಿದ್ದಕ್ಕೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ಈ ವೇಳೆ ಓರ್ವ ಮೃತಪಟ್ಟಿದ್ದರೆ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಸುಚಿತ್ರಾ ಎಂಬ ಮಹಿಳೆ ಶಿವಮೊಗ್ಗ ಮೂಲದ ಕಮಲಾಕರ ಭಟ್ ಗುರೂಜಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಕಮಲಾಕರ್​​ ಮೂಲತಃ ಸಿದ್ದಾಪುರ ಮೂಲದ ಹೆಮ್ಮನಬೈಲ್ ಗ್ರಾಮದವನು. ಸ್ವಾಮೀಜಿಯೊಂದಿಗೆ ತಾಯಿ ಅಕ್ರಮ ಸಂಬಂಧ ಹೊಂದಿರುವ ವಿಚಾರ ಸುಚಿತ್ರಾ ಪುತ್ರಿಗೆ ಗೊತ್ತಾಗಿತ್ತು. ಈ ವಿಚಾರವನ್ನು ತಂದೆ ಮಹೇಶ್ ನಾಯ್ಕಗೆ ಆಕೆ ತಿಳಿಸಿದ್ದಳು. ಇದೇ ವಿಚಾರವಾಗಿ ಮಹೇಶ್ ನಾಯ್ಕ ಪೊಲೀಸ್​​ ಠಾಣೆಗೆ ತೆರಳಿ ದೂರು ನೀಡಿದ್ದ.

ಆದ್ದರಿಂದ ಸುಚಿತ್ರಾ, ಆಕೆಯ ತಂದೆ ಲೋಕನಾಥ್ ಮತ್ತು ಸಹಚರನಿಂದ ಹಲ್ಲೆ ನಡೆಸಲಾಗಿದೆ. ಘಟನೆಯಲ್ಲಿ ಸುಚಿತ್ರಾ ಪತಿ ಮಹೇಶ್​​, ವಸಂತ್ ನಾಯ್ಕ ಮತ್ತು ಕುಮಾರ್​​ ಗಂಭೀರ ಗಾಯಗೊಂಡಿದ್ದು, ಈ ಪೈಕಿ ವಸಂತ್ ನಾಯ್ಕ ಆಸ್ಪತ್ರೆ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಇನ್ನು ಘಟನೆ ಸಂಬಂಧ ಕೃತ್ಯವೆಸಗಿ ಪರಾರಿಯಾಗುತ್ತಿದ್ದ ಗುರೂಜಿ ಸೇರಿ 7ಮಂದಿಯನ್ನು ಪೊಲೀಸರು ವಶಕ್ಕೆ ವಡೆದಿದ್ದಾರೆ. ಶಿವಮೊಗ್ಗದಲ್ಲಿ ಮೂವರು ಹಾಗೂ ಸಿದ್ದಾಪುರದಲ್ಲಿ ನಾಲ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಪ್ರಕರಣದಲ್ಲಿ ಎ1 ಸುಚಿತ್ರಾ, ಎ2 ಲೋಕನಾಥ ಚೌಡಪ್ಪ ನಾಯ್ಕ್, ಎ3 ಅಪರಿಚಿತರು ಹಾಗೂ ಎ4 ಕಮಲಾಕರ ಭಟ್​​ ಸ್ವಾಮೀಜಿ ಆಗಿದ್ದು, ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

BREAKING NEWS
Loading latest news...
Join our WhatsApp Channel Powered By : Online Pudu