ವಿದ್ಯಾರ್ಥಿನಿಯರು ಬಟ್ಟೆ ಬದಲಾಯಿಸುವಾಗ ಕದ್ದು ನೋಡಿದ ಆರೋಪ- ಸ್ಥಳೀಯರಿಂದ ಥಳಿತ: ಹೃದಯಾಘಾತದಿಂದ ಯುವಕ ಸಾವು



ಬಾಗಲಕೋಟೆ: ಇಲ್ಲಿನ ಜಮಖಂಡಿ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಂದು ನಡೆದ ಗಲಾಟೆಯಲ್ಲಿ ಯುವಕನೊಬ್ಬ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಸಾವಳಗಿ ಗ್ರಾಮದ ಸುದೀಪ್ ಪಾಂಗೆ (19) ಸಾವನ್ನಪ್ಪಿದ ಯುವಕ.

ಮಾರ್ಚ್ 11ರಂದು ರಾತ್ರಿ ಸಾವಳಗಿ ಗ್ರಾಮ ಪಂಚಾಯತ್ ಕಟ್ಟಡದ ಆವರಣದಲ್ಲಿ ಇರುವ ಸಾವಳಗಿ ಸರ್ಕಾರಿ ಹೆಣ್ಣುಮಕ್ಕಳ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಸುದೀಪ್ ಪಾಂಗೆ ಶಾಲೆಯ ಮೇಲ್ಛಾವಣಿಯ ಮೇಲೆ ಕುಳಿತು ಕೆಳಗೆ ನಡೆಯುದ್ದ ಕಾರ್ಯಕ್ರಮದತ್ತ ಕಲ್ಲು ಎಸೆದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ವಿದ್ಯಾರ್ಥಿನಿಯರು ಉಡುಪು ಬದಲಾಯಿಸುತ್ತಿದ್ದ ಸ್ಥಳದತ್ತ ಇಣುಕಿ ನೋಡಿದ್ದಾನೆ ಎಂಬ ಆರೋಪವೂ ಸ್ಥಳೀಯರಿಂದ ಕೇಳಿಬಂದಿದೆ.

ಪರಿಣಾಮ ಆಕ್ರೋಶಿತ ಕೆಲ ಯುವಕರು ಸುದೀಪ್ ಮೇಲೆ ಹಲ್ಲೆ ನಡೆಸಿದ್ದರು.ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ಎಂಬವರು ಸುದೀಪ್‌ಗೆ ಥಳಿಸಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮೃತನ ಸಹೋದರ ನೀಡಿದ ದೂರಿನ ಆಧಾರದ ಮೇಲೆ, ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ರಾಜು ಮಾಳಿ, ವಿಜಯ್ ಸಾವಳಗಿ ಮತ್ತು ಮಲ್ಲಿಕಾರ್ಜುನ ಮಾಳಿ ವಿರುದ್ಧ ಸಾವಳಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಸಾವಳಗಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

BREAKING NEWS
Loading latest news...
Join our WhatsApp Channel Powered By : Online Pudu