ಮಂಗಳೂರು: ಮೂಡಬಿದಿರೆ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅಮಾನತು ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಶಿಕ್ಷಕಿ ಮೇಲೆ ಅತ್ಯಾಚಾರ ಎಸರುವ ಆರೋಪದ ಮೇಲೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಮುಖ್ಯ ಶಿಕ್ಷಕಿ 2018 ರಿಂದ 2023ರ ನಡುವೆ ತನ್ನ ಮನೆಗೆ ಬಂದು ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಬಲವಂತವಾಗಿ ಅತ್ಯಾಚಾರ ಮಾಡಿದ್ದಾನೆಂದು ಶಿಕ್ಷಕಿ ದೂರು ನೀಡಿದ್ದಾರೆ. ಈ ಬಗ್ಗೆ ಮಾ.21ರಂದು ಸಂಜೆ ವೇಣೂರು ಪೊಲೀಸ್ ಠಾಣೆಯಲ್ಲಿ ನೊಂದ ಶಿಕ್ಷಕಿ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ವಿರುದ್ಧ 376(2)(a)(1),376(2)(n),384,506 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.