ಬೆಂಗಳೂರು: ಬಾಮೈದನೊಂದಿಗೆ ಎರಡು ಮಕ್ಕಳ ತಾಯಿ ತಂಗಿ ಪರಾರಿ- ಬಾವ ಮಾಡಿದ್ದೇನು ಗೊತ್ತಾ?



ಆನೇಕಲ್: ಭಾವನೇ ಬಾಮೈದನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಳ್ಳಿಯ ನಿರ್ಜನ ಪ್ರದೇಶದಲ್ಲಿ ನಡೆದಿದೆ.

ಶ್ರೀನಿವಾಸ್​​ ಎಂಬಾತ ತನ್ನ ಬಾಮೈದ ರಂಜಿತ್ (24)ನನ್ನು ಕೊಲೆ ಮಾಡಿದ್ದಾನೆ. ಈ್ ಕೊಲೆ ಮಾಡಿದಲ್ಲದೇ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಹಾಕಿದ್ದಾನೆ. ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ. ಸ್ಥಳಕ್ಕೆ ಬನ್ನೇರುಘಟ್ಟ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಂಜಿತ್​ನ ಅಕ್ಕ ಪವಿತ್ರನನ್ನು ಶ್ರೀನಿವಾಸ್​​ ಮದುವೆ ಮಾಡಿಕೊಂಡಿದ್ದ. ಶ್ರೀನಿವಾಸ್ ತಂಗಿ ಕೋಮಲ್​‌ಗೆ ಬೇರೊಬ್ಬನೊಂದಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಆಕೆ ಪತಿಯನ್ನು ಬಿಟ್ಟು ರಂಜಿತ್ ಜೊತೆಗೆ ಪರಾರಿಯಾಗಿದ್ದಳು. ಈ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿತ್ತು.

ಶ್ರೀನಿವಾಸ್​​ ರಂಜಿತ್​​​​ನ ಕರೆದು ವಾರ್ನಿಂಗ್ ಕೂಡ ಮಾಡಿದ್ದ. ಆದರೂ ಆತ ಆಕೆಯೊಂದಿಗಿನ ಸಂಬಂಧ ಬಿಡದ ಕೋಪದಲ್ಲಿ ಶ್ರೀನಿವಾಸ್ ರಂಜಿತ್​ ಮೇಲೆ ಸೇಡು ಬೆಳೆಸಿಕೊಂಡಿದ್ದ. ಆದ್ದರಿಂದ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಬಿಲ್ವಾರದಹಳ್ಳಿಯ ನಿರ್ಜನ ಪ್ರದೇಶಕ್ಕೆ ರಂಜಿತ್​ನನ್ನು ಕರೆತಂದಿದ್ದ ಶ್ರೀನಿವಾಸ್ ಅಲ್ಲಿಯೇ ಆತನನ್ನು​​ ಕೊಲೆ ಮಾಡಿದ್ದಾನೆ. ಸದ್ಯ ಬನ್ನೇರುಘಟ್ಟ ಪೊಲೀಸರಿಂದ ಆರೋಪಿ‌ ಶ್ರೀನಿವಾಸನನ್ನು ವಶಕ್ಕೆ ಪಡೆಯಲಾಗಿದೆ.

ಘಟನಾ ಸ್ಥಳಕ್ಕೆ ಡಿವೈಎಸ್​​ಪಿ ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಬಗ್ಗೆ ಬನ್ನೇರುಘಟ್ಟ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್​ ಮಾಹಿತಿ ನೀಡಿದ್ದು, ಸೋಕೋ ಟೀಮ್​ನಿಂದ ಸಾಕ್ಷ್ಯ ಸಂಗ್ರಹಿಸಲಾಗಿದೆ. ಕಬ್ಬಿಣದ ರಾಡ್​ನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಮೃತದೇಹದ ಜೊತೆ ಕಬ್ಬಿಣದ ರಾಡ್ ಪತ್ತೆ ಆಗಿದೆ ಎಂದರು.