ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್‌ಗೆ 10ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ




ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣದ ಆರೋಪಿ ಮಹಮ್ಮದ್ ಶಾರೀಕ್‌ಗೆ ವಿಶೇಷ ಎನ್‌ಐಎ ನ್ಯಾಯಾಲಯವು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಿದೆ.

ಶಾರೀಕ್ ನ್ಯಾಯಾಲಯದ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದನು. ಈ ಘಟನೆ 2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಸಮೀಪದಲ್ಲಿ ನಡೆದಿದೆ.

ತನಿಖಾಧಿಕಾರಿಗಳ ಪ್ರಕಾರ, ಶಾರೀಕ್ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಕುಕ್ಕರ್ ಬಾಂಬ್ ಇಡುವ ಉದ್ದೇಶದಿಂದ ತೆರಳುತ್ತಿದ್ದ. ಆದರೆ ಮಾರ್ಗ ಮಧ್ಯೆ ಗರೋಡಿ ಸಮೀಪ ಸ್ಫೋಟ ಸಂಭವಿಸಿ, ದೊಡ್ಡ ದುರಂತ ತಪ್ಪಿದೆ. ಈ ಸ್ಫೋಟದಲ್ಲಿ ಶಾರೀಕ್ ಸ್ವತಃ ಗಾಯಗೊಂಡಿದ್ದನು. ಸ್ಫೋಟದಲ್ಲಿ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಕೂಡ ಗಾಯಗೊಂಡಿದ್ದರು.

ಸುಮಾರು ಮೂರು ತಿಂಗಳು ಚಿಕಿತ್ಸೆ ಪಡೆದ ಬಳಿಕ, ಶಾರೀಕ್‌ನನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಯಿತು. ಬಳಿಕ ತನಿಖಾ ಸಂಸ್ಥೆ ತನಿಖೆಯನ್ನು ಪೂರ್ಣಗೊಳಿಸಿ, ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿತು. ಇದೀಗ ಆರೋಪಿಗೆ ಎನ್ಐಎ ನ್ಯಾಯಾಲಯವು 10ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.