ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಪುತ್ತೂರು: ಡಿವೈಡರ್‌ಗೆ ಬೈಕ್ ಡಿಕ್ಕಿಯಾಗಿ ಯುವಕ ಬಲಿ- ಭೀಕರ ರಸ್ತೆ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ


ಪುತ್ತೂರು: ನಿಯಂತ್ರಣ ತಪ್ಪಿದ ಬೈಕೊಂದು ಡಿವೈಡರ್ ಹಾಗೂ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಪಡೀಲ್ ಸಮೀಪ ನಡೆದಿದೆ.

ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಗ್ರಾಮದ ನಿವಾಸಿ ಧನರಾಜ್ (23) ಮೃತಪಟ್ಟ ಯುವಕ.





ಬೆಂಗಳೂರಿನ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಧನರಾಜ್ ಜಾತ್ರೆಗೆಂದು ಊರಿಗೆ ಬಂದಿದ್ದರು‌. ಎ.18ರಂದು ಬೆಳಗ್ಗೆ 11.38ರ ವೇಳೆಗೆ ಪುತ್ತೂರಿನ ಪಡೀಲ್ ಬಳಿ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 





ಅಪಘಾತದ ತೀವ್ರತೆಗೆ ಡಿವೈಡರ್ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಮತ್ತೊಂದು ಬೈಕ್‌ಗೂ ಇವರ ಬೈಕ್ ಢಿಕ್ಕಿಯಾಗಿದೆ. ಪರಿಣಾಮ ಆ ಬೈಕ್ ಇನ್ನಿಬ್ಬರು ಸವಾರರೂ ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.