ಕಡಬ: ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖಾ ನೌಕರರ ಸಂಘ(ರಿ), ಬೆಂಗಳೂರು ಜಿಲ್ಲಾ ಘಟಕದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ಕಂದಾಯ ಇಲಾಖೆಯ ವಾರ್ಷಿಕ ಕ್ರೀಡಾಕೂಟ–2026 ಬಹು ವರ್ಷಗಳ ಬಳಿಕ ಅದ್ದೂರಿಯಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.
ಜಿಲ್ಲೆಯ ವಿವಿಧ ತಾಲೂಕುಗಳ ಕಂದಾಯ ಇಲಾಖೆ ಸಿಬ್ಬಂದಿ ಉತ್ಸಾಹದಿಂದ ಭಾಗವಹಿಸಿ ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದರು. ವಿವಿಧ ಕ್ರೀಡಾ ಸ್ಪರ್ಧೆಗಳ ನಡುವೆ ನಡೆದ ಮಹಿಳೆಯರ ತ್ರೋಬಾಲ್ ಪಂದ್ಯಾವಳಿಯಲ್ಲಿ ಕಡಬ ಮಹಿಳಾ ತಂಡ ರನ್ನರ್ಸ್ ಸ್ಥಾನ ಪಡೆದು ಗಮನ ಸೆಳೆಯಿತು.
ಫೈನಲ್ ಪಂದ್ಯದಲ್ಲಿ ಸುಳ್ಯ ತಂಡ ವಿಜೇತರಾಗಿ ಹೊರಹೊಮ್ಮಿದರೆ, ಕಡಬ ತಂಡ ಉತ್ತಮ ಆಟದ ಮೂಲಕ ಪ್ರಶಂಸೆ ಗಳಿಸಿತು.
ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾಧಿಕಾರಿಯವರು, ಅಪರ ಜಿಲ್ಲಾಧಿಕಾರಿಯವರು, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು, ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಜಿಲ್ಲೆಯ ವಿವಿಧ ತಾಲೂಕುಗಳ ತಹಸೀಲ್ದಾರರು, ಎನ್‌ಐಟಿಕೆ ಸಂಸ್ಥೆಯ ಡೀನ್, ರಾಜ್ಯಾಧ್ಯಕ್ಷರು – ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ(ರಿ), ತಾಲೂಕು ಮಟ್ಟದ ಕಂದಾಯ ನೌಕರರ ಸಂಘ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.
ಕ್ರೀಡಾಕೂಟದಲ್ಲಿ ಜಯಗಳಿಸಿದ ಎಲ್ಲಾ ತಂಡಗಳಿಗೆ ಹಾಗೂ ಭಾಗವಹಿಸಿದ ಸಿಬ್ಬಂದಿಗೆ ಜಿಲ್ಲಾ ಸಂಘದ ವತಿಯಿಂದ ಅಭಿನಂದನೆಗಳು ಸಲ್ಲಿಸಲಾಯಿತು.