ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಬೆಳ್ತಂಗಡಿ: ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ- ಅರಸಿನಮಕ್ಕಿ ಗ್ರಾಮೀಣ ಅಂಚೆ ವಿತರಕ ಅರೆಸ್ಟ್


ಬೆಳ್ತಂಗಡಿ: ವಿವಾಹಿತೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಗ್ರಾಮೀಣ ಅಂಚೆ ವಿತರಕನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿಯ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿ, ಅರಸಿನಮಕ್ಕಿ ಗ್ರಾಮೀಣ ಅಂಚೆ ವಿತರಕನಾಗಿ ಕೆಲಸ ಮಾಡುತ್ತಿದ್ದ ಸುರೇಶ್(35) ಬಂಧಿತ ಆರೋಪಿ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ವಿವಾಹಿತೆಯೊಬ್ಬರು '2023ರ ಡಿಸೆಂಬರ್‌ನಲ್ಲಿ ಸುರೇಶ್ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ' ಎಂದು ಆರೋಪಿಸಿ 2026ರ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಜೂನ್ 8ರಂದು ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಚಾರಣೆಯ ಬಳಿಕ ಜೂನ್ 9ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪ್ರಭಾರ ಸಬ್ ಇನ್ಸ್ಪೆಕ್ಟರ್ ಕಿಶೋರ್ ಪಿ., ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರ ಹಾಗೂ ಸಿಬ್ಬಂದಿಯ ತಂಡ ಕಾರ್ಯಾಚರಣೆ ನಡೆಸಿತು.