ಉದ್ಯೋಗ ವಾರ್ತೆ: ಕೃಷಿ ಇಲಾಖೆ ಹುದ್ದೆ, ಹಾಸ್ಟೆಲ್ ವಾರ್ಡನ್ ಹುದ್ದೆಗೆ ಅರ್ಜಿ ಆಹ್ವಾನ
ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ನಾನಾ ತಾಲೂಕುಗಳಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ನಾಲ್ಕು ತಾಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಎರಡು ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಈ ಖಾಲಿ ಹುದ್ದೆಗೆ ತಾತ್ಕಾಲಿಕ ನೇಮಕಾತಿಗಾಗಿ ಕೃಷಿ ಹಾಗೂ ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಪಡೆದಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಹುದ್ದೆಯು ಗುತ್ತಿಗೆ ಆಧರಿತ ಹಾಗೂ ತಾತ್ಕಾಲಿಕವಾಗಿರುತ್ತದೆ. ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಅರ್ಜಿ ಸಲ್ಲಿಸಲು ಜೂನ್ 24 ಕೊನೆಯ ದಿನವಾಗಿದ್ದು, ಸಂಜೆ 5.30 ರೊಳಗಾಗಿ ಸಲ್ಲಿಸಬಹುದಾಗಿದೆ.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಇಮೇಲ್ jdagrimng@gmail.com ಸಂಪರ್ಕಿಸಬಹುದು.
ಹಾಸ್ಟೆಲ್ ವಾರ್ಡನ್ ಹುದ್ದೆಗೆ ಅರ್ಜಿ
ಜಿಟಿಟಿಸಿ ಬೈಕಂಪಾಡಿ ಮಂಗಳೂರು ಡಿಪ್ಲೊಮಾ ಕಾಲೇಜಿನ ಹಾಸ್ಟೆಲ್‌ಗೆ ಹೊರಗುತ್ತಿಗೆ ಆಧಾರದಲ್ಲಿ 1 ವಾರ್ಡನ್ ಹುದ್ದೆಗೆ ಪುರುಷ ಅಭ್ಯರ್ಥಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾಸ್ಟೆಲ್ ನಿರ್ವಹಣೆ, ವಿದ್ಯಾರ್ಥಿಗಳ ಮೇಲ್ವಿಚಾರಣೆ ಮತ್ತು ಶಿಸ್ತುಪಾಲನೆ ಕಾರ್ಯಗಳಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಯು ಹಾಸ್ಟೆಲ್‌ನಲ್ಲಿ ಪೂರ್ಣಾವಧಿ ಸೇವೆ ಸಲ್ಲಿಸಲು ಸಿದ್ಧರಿರಬೇಕು. ಹೆಚ್ಚಿನ ಮಾಹಿತಿಗೆ ನಗರದ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಜಿಟಿಟಿಸಿ ಸಂಸ್ಥೆ ಸಂಪರ್ಕಿಸುವಂತೆ ಪ್ರಿನ್ಸಿಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
