ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹ

ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹ





ಆರ್ಥಿಕ ಸಂಕಷ್ಟದ ಪ್ರಸ್ತುತ ಸಂದರ್ಭದಲ್ಲಿ ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಕರ್ನಾಟಕ ರಾಜ್ಯ ರೈತ ಸಂಘ ಆಗ್ರಹಿಸಿದೆ.


ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ್ ಶೆಟ್ಟಿ ನಡಿಕಂಬಳಗುತ್ತು ಹಾಗೂ ದ.ಕ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ಈ ಅಗ್ರಹವನ್ನು ಮಾಡಿದ್ದಾರೆ.


ಜಾಗತಿಕ ಯುದ್ಧ ಪರಿಣಾಮ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಿಂದಾಗಿ ಕೃಷಿ ವಲಯಕ್ಕೆ ದೊಡ್ಡ ಹೊಡೆತ ಉಂಟಾಗಿದೆ.


ಈಗಾಗಲೆ ಗದ್ದೆ ಉಳುಮೆ,ಅಡಿಕೆ ತೋಟಗಳಿಗೆ ಮದ್ದು ಸಿಂಪಡಣೆ,ಅಡಿಕೆ ತೋಟಗಳಲ್ಲಿ ಹಾಗೂ ಇತರ ಕಡೆ ಕಳೆನಾಶ ಸಿಂಪಡಣೆ ಹಾಗೂ ಇತರ ಕೆಲಸಗಳು ಪೆಟ್ರೋಲ್ ಹಾಗೂ ಡಿಸೇಲ್ ಮೇಲೆ ಅವಲಂಬಿತವಾಗಿದ್ದು ತೈಲ ಬೆಲೆ ಏರಿಕೆಯಿಂದಾಗಿ ರೈತರಿಗೆ ಹಾಗೂ ಕೃಷಿವಲಯಕ್ಕೆ ನಷ್ಟ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.


ಕೂಲಿಯಾಳುಗಳ ಕೊರತೆಯಿಂದ ಕೃಷಿ ಚಟುವಟಿಕೆಗಳು ಹಿನ್ನಡೆಗೊಂಡಿದ್ದರೂ ರೈತರು ಯಾಂತ್ರಿಕ ಕೃಷಿ ಚಟುವಟಿಕೆಯತ್ತ ಗಮನ ಹರಿಸಿದ್ದರು.ಕೃಷಿ ಸರಕು ಸಾಗಣೆಯ ವಾಹನಗಳಿಗೆ ದುಬಾರಿ ಖರ್ಚು ತಗುಲಿದ್ದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ‌.


ಆದ್ದರಿಂದ ಕೃಷಿ ಚಟುವಟಿಕೆಯಲ್ಲಿ ನಿರತರಾಗಿರುವ ಕೃಷಿ ಯಂತ್ರೋಪಕರಣ ಹಾಗೂ ವಾಹನಗಳಿಗೆ ಡಿಸೇಲ್ ಸಬ್ಸಿಡಿ ನೀಡಬೇಕೆಂದು ದ.ಕ ಜಿಲ್ಲೆಯ ಸಂಸದರು ಹಾಗೂ ಶಾಸಕರಿಗೆ ರೈತ ಸಂಘ ಮನವಿ ಮಾಡಿದೆ.


ಇದೇ ವೇಳೆ, ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಇವರಲ್ಲಿ ಮನವಿ ಮಾಡಲಾಗುವುದು ಎಂದು ಮನೋಹರ್ ಶೆಟ್ಟಿ ನಡಿಕಂಬಳಗುತ್ತು ಹಾಗೂ ಶ್ರೀಧರ ಶೆಟ್ಟಿ ಬೈಲುಗುತ್ತು ಮಾಹಿತಿ ನೀಡಿದ್ದಾರೆ.


BREAKING NEWS
Loading latest news...
Join our WhatsApp Channel Powered By : Online Pudu