ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ಮೊಬೈಲ್​ನಿಂದ ಹೊಡೆದು ಪತಿಯನ್ನೇ ಕೊಲೆಗೈದ ಪತ್ನಿ- ಅಚ್ಚರಿಯಾದರೂ ಇದು ಸತ್ಯ



ಬೋಲಾಂಗೀರ್: ಪತ್ನಿಯೊಬ್ಬಳು ಮೊಬೈಲ್‌ನಿಂದ ತಲೆಗೆ ಒಡೆದ ಪರಿಣಾಮ ಪತಿ ಜೀವಬಿಟ್ಟ ಘಟನೆ ಒಡಿಶಾದಲ್ಲಿ ರಾಜ್ಯದಲ್ಲಿ ನಡೆದಿದೆ. ನಂಬುವುದು ಕಷ್ಟವಾದರೂ ಇದು ಸುಳ್ಳಂತೂ ಅಲ್ಲ. 

ಕೌಟುಂಬಿಕ ಕಲಹದ ಸಂದರ್ಭ ಪತ್ನಿ ತನ್ನ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಹೊಡೆದಿದ್ದಾಳೆ‌. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

ಶನಿವಾರ ದಂಪತಿಯ ನಡುವೆ ಮನೆಯಲ್ಲಿ ಸಣ್ಣದಾಗಿ ಕೌಟುಂಬಿಕ ಜಗಳ ಆರಂಭವಾಗಿದೆ. ಬಳಿಕ ಈ ಜಗಳ ತಾರಕಕ್ಕೇರಿತ್ತು.  ಮಾತಿನ ಚಕಮಕಿಯ ನಡುವೆ, ಕೋಪಗೊಂಡ ಪತ್ನಿ ತನ್ನ ಕೈಯಲ್ಲಿದ್ದ ಮೊಬೈಲ್ ಫೋನ್‌ನಿಂದ ಪತಿಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ಇದರಿಂದಾಗಿ ಪತಿ ತಲೆಗೆ ಗಂಭೀರ ಪೆಟ್ಟಾಗಿದ್ದು, ಆತ ತೀವ್ರವಾಗಿ ಗಾಯಗೊಂಡಿದ್ದಾನೆ.

ಗಾಯಗೊಂಡಿದ್ದ ವ್ಯಕ್ತಿಯನ್ನು ಕುಟುಂಬಸ್ಥರು ತಕ್ಷಣವೇ ಬೋಲಾಂಗೀರ್‌ನಲ್ಲಿರುವ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ನಂತರ ಅವರ ಆರೋಗ್ಯ ಸ್ಥಿತಿ ಸುಧಾರಿಸಿದ್ದನ್ನು ಗಮನಿಸಿದ ವೈದ್ಯರು, ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿದ್ದರು. ಆದರೆ, ಆಸ್ಪತ್ರೆಯಿಂದ ಮನೆಗೆ ತಲುಪಿದ ಕೆಲವೇ ದಿನಗಳಲ್ಲಿ ಅವರ ಆರೋಗ್ಯ ಇನ್ನಷ್ಟು ಹದಗೆಟ್ಟಿತ್ತು. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಅವರನ್ನು ಮತ್ತೆ ತುರ್ತು ಚಿಕಿತ್ಸೆಗಾಗಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ವೈದ್ಯರು ಅವರನ್ನು ಉಳಿಸಲು ತಮ್ಮ ಅತ್ಯುತ್ತಮ ಪ್ರಯತ್ನಗಳನ್ನು ನಡೆಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಘಟನೆಯ ನಂತರ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಈ ಘಟನೆಯ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪತ್ನಿ ಮೊಬೈಲ್‌ನಿಂದ ತಲೆಗೆ ಹೊಡೆದ ಆಘಾತದಿಂದಲೇ ಆಂತರಿಕ ರಕ್ತಸ್ರಾವವಾಗಿ ವ್ಯಕ್ತಿ ಮೃತಪಟ್ಟಿದ್ದಾರೆಯೇ ಅಥವಾ ಸಾವಿಗೆ ಬೇರೆನಾದರೂ ಕಾರಣವಿದೆಯೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. ವರದಿ ಬಂದ ನಂತರ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.