ಬ್ರೇಕಿಂಗ್ ನ್ಯೂಸ್

[getTicker results="10" label="recent" type="ticker"]

ದಕ್ಷಿಣ ಕನ್ನಡ: ಅಪ್ರಾಪ್ತೆಯ ಮೇಲೆ ದೌರ್ಜನ್ಯ ಪ್ರಕರಣ; 64 ವರ್ಷದ ವೃದ್ಧನಿಗೆ 5 ವರ್ಷ ಕಾರಾಗೃಹ ಶಿಕ್ಷೆ! ದೋಷಿಗೆ ₹35 ಸಾವಿರ ದಂಡ; ಬೆಳ್ಳಾರೆ ಠಾಣೆಯ ಕೇಸ್‌ನಲ್ಲಿ ಮಂಗಳೂರು ಸೆಷನ್ಸ್ ಕೋರ್ಟ್ ಮಹತ್ವದ ತೀರ್ಪು!


ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದ ಕಡಬ ಮೂಲದ ವ್ಯಕ್ತಿಗೆ ಮಂಗಳೂರಿನ ನ್ಯಾಯಾಲಯವು ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕಡಬ ತಾಲೂಕಿನ ಕುದ್ಮಾರು ಗ್ರಾಮದ ಅಬ್ದುಲ್ಲಾ (64) ಕಠಿಣ ಶಿಕ್ಷೆಗೆ ಗುರಿಯಾದ ವ್ಯಕ್ತಿ.

ಏನಿದು ಪ್ರಕರಣ? ಕಳೆದ 2020 ರಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ಈ ದೌರ್ಜನ್ಯ ಕೃತ್ಯ ನಡೆದಿತ್ತು. ಈ ಸಂಬಂಧ ದಾಖಲಾದ ದೂರಿನನ್ವಯ ಪೊಲೀಸರು ಐಪಿಸಿ ಕಲಂ 354(A1), 506 ಹಾಗೂ ಪೋಕ್ಸೋ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು.

ಸುಳ್ಯದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ನವೀನ್‌ಚಂದ್ರ ಜೋಗಿ ಅವರು ತನಿಖೆ ನಡೆಸಿ, ಸಾಕ್ಷ್ಯಗಳನ್ನು ಒಟ್ಟುಗೂಡಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು.

ಕೋರ್ಟ್ ಆದೇಶದ ವಿವರ: ಪ್ರಕರಣದ ಸಮಗ್ರ ವಿಚಾರಣೆ ನಡೆಸಿದ ಮಂಗಳೂರಿನ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಸುಮಂಗಲಾ ಚಕಲಬ್ಬಿ ಅವರು, ಆರೋಪಿಯ ಮೇಲಿನ ದೋಷ ಸಾಬೀತಾಗಿದೆ ಎಂದು ತೀರ್ಮಾನಿಸಿದರು.

ದೋಷಿಗೆ 5 ವರ್ಷಗಳ ಜೈಲು ಶಿಕ್ಷೆ ಮತ್ತು ₹35,000/- ಜುಲ್ಮಾನೆ ವಿಧಿಸಲಾಗಿದ್ದು, ದಂಡ ಕಟ್ಟಲು ತಪ್ಪಿದರೆ ಹೆಚ್ಚುವರಿಯಾಗಿ 6 ತಿಂಗಳು ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪಿನಲ್ಲಿ ಸ್ಪಷ್ಟಪಡಿಸಲಾಗಿದೆ. ಸರ್ಕಾರದ ಪರವಾಗಿ ಅಭಿಯೋಜಕ ಪುಷ್ಪರಾಜ್ ವಾದ ಮಂಡಿಸಿದ್ದರು.